ಶಿವಮೊಗ್ಗ, ಸೆ.24 ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆ (UFBU) ಯು ಸೆ.28 ರಿಂದ 30ರ ವರೆಗೆ ದೇಶ ವ್ಯಾಪಿ ಮುಷ್ಕರ ಘೋಷಿಸಿರುವ ಹಿನ್ನೆಲೆಯಲ್ಲಿ, ಹಾಗೂ ಸೆ. 26 ಮತ್ತು 27 ರಂದು ವಾರದ ರಜೆ ಇರುವುದರಿಂದ ಬ್ಯಾಂಕ್ ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ

ವಹಿಸಲು, ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ಮತ್ತು ಗ್ರಾಮೀಣ ಬ್ಯಾಂಕುಗಳ ಶಾಖೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಆರ್ಬಿಐ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕುಗಳ ಶಾಖೆಗಳು ದಿನಾಂಕ

27.09.2026 ರ ಭಾನುವಾರದಂದು ತೆರೆಯಲಿದ್ದು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.