ಶಿವಮೊಗ್ಗ, ಸೆ.24: ಸೆ.25ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ನಗರದೆಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದ್ದು, ಸಾವಿರಾರು ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

SP/Addl. SP-5, DySP-22, CPI/PI-84, PSI/RSI-289, ASI/ARSI-108, HC/PC-2,134 ಹಾಗೂ 600 ಹೋಂ ಗಾರ್ಡ್ಗಳು ಸೇರಿದಂತೆ ಬೃಹತ್ ಪೊಲೀಸ್ ಪಡೆ ಭದ್ರತಾ ಕರ್ತವ್ಯ ನಿರ್ವಹಿಸಲಿದೆ.

ಇದರೊಂದಿಗೆ 12 KSRP, 10 DAR, 2 QRT, D-SWAT, 2 RAF, SAF ಹಾಗೂ ASC ಪಡೆಗಳನ್ನು ನಿಯೋಜಿಸಲಾಗಿದೆ. ತುರ್ತು ಸಂದರ್ಭಗಳಿಗಾಗಿ 7 ಅಗ್ನಿಶಾಮಕ ವಾಹನ ಹಾಗೂ 4 ಆಂಬ್ಯುಲೆನ್ಸ್ಗಳನ್ನು ಸಿದ್ಧವಾಗಿಡಲಾಗಿದೆ.

ಮೆರವಣಿಗೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು 3,500 ವಿಡಿಯೋ ಕ್ಯಾಮೆರಾ/ಸಿಸಿಟಿವಿ ಹಾಗೂ 12 ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 900 PAR ಪ್ರಕರಣ ದಾಖಲಿಸಿ, 35 ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮೆರವಣಿಗೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.