
ಶಿವಮೊಗ್ಗ : ರಾಜ್ಯದ ಹಲವು ಭಾಗಗಳಲ್ಲಿ ಸಂಚಾರಿ ಠಾಣೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ನನಗಿದೆ. ಆದರೆ, ನನ್ನದೇ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆ ಹಾಗೂ ತೃಪ್ತಿ ತಂದಿದೆ” ಎಂದು ಶಿವಮೊಗ್ಗದ ದಕ್ಷ ಹಾಗೂ ಜನಪ್ರಿಯ ವೃತ್ತ ನಿರೀಕ್ಷಕರಾದ (ಸರ್ಕಲ್ ಇನ್ಸ್ಪೆಕ್ಟರ್) ಶ್ರೀ ದೇವರಾಜ್ ಅವರು ನುಡಿದರು.

ಶಿವಮೊಗ್ಗದ ಜವಳಿ ವರ್ತಕರ ಸಂಘದ (ಜ.ವ.ಸಂ) 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಬೆಳಿಗ್ಗೆ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಕ್ರೀಡಾಂಗಣದಲ್ಲಿ ಶಾಟ್ಪುಟ್ ಎಸೆಯುವ ಮೂಲಕ ಪಂದ್ಯಾವಳಿಗೆ

ಚಾಲನೆ ನೀಡಿ ಮಾತನಾಡಿದ ಅವರು, “ಇಲ್ಲಿನ ಸಾರ್ವಜನಿಕರು ಹಾಗೂ ವರ್ತಕರ ನಿರಂತರ ಸಹಕಾರದಿಂದ ನಗರದ ಹಲವಾರು ಸಂಚಾರ ಮತ್ತು ಭದ್ರತಾ ಸಮಸ್ಯೆಗಳನ್ನು ಯಶಸ್ವಿಯಾಗಿ ಬಗೆಹರಿಸಲು ಸಾಧ್ಯವಾಗಿದೆ” ಎಂದು ಸ್ಮರಿಸಿದರು.
ಸಂಚಾರ ಜಾಗೃತಿಗೆ ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳಿದ್ದು

ಫುಟ್ಪಾತ್ ಅತಿಕ್ರಮಣ ತೆರವು, ಟ್ರಾಫಿಕ್ ಸಿಗ್ನಲ್ ನಿಯಮಗಳ ಶಿಸ್ತುಬದ್ಧ ಪಾಲನೆ, ಸುಗಮ ಪಾರ್ಕಿಂಗ್ ವ್ಯವಸ್ಥೆ ಹಾಗೂ ಹೆಚ್ಚುತ್ತಿರುವ ಸೈಬರ್ ವಂಚನೆಗಳ ಕುರಿತು ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲಾಗುವುದೆಂದರು.

ಸಾಧಕರಿಗೆ ದೇಸೀ ಶೈಲಿಯ ಗೌರವ ಹಾಗೂ ನಗದು ಪುರಸ್ಕಾರ
ಇದೇ ಶುಭ ಸಂದರ್ಭದಲ್ಲಿ ಜವಳಿ ವರ್ತಕರ ಸಂಘದ ವತಿಯಿಂದ ಇನ್ಸ್ಪೆಕ್ಟರ್ ದೇವರಾಜ್ ಅವರನ್ನು ರೆಡಿಮೇಡ್ ಶಾಲು, ಹಾರ, ನೆನಪಿನ ಕಾಣಿಕೆಗಳಿಂದ ಹೊರತಾದ ಸಾಂಪ್ರದಾಯಿಕ ದೇಸೀ ಶೈಲಿಯಲ್ಲಿ ಅತ್ಯಂತ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದು ಶಿವಮೊಗ್ಗಕ್ಕೆ ಕೀರ್ತಿ ತಂದ ಸರ್ಕಾರಿ ಕ್ರೀಡಾ ಹಾಸ್ಟೆಲ್ನ ಇಬ್ಬರು ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಂಘದ ವತಿಯಿಂದ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಕುಮಾರ್ ಬೇದ್ರೆ ವಹಿಸಿದ್ದರು. ಸಂಘದ ಇತರೆ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಿದರು.ಅವಿನಾಶ್ ಮತ್ತು ಪವನ್ ಲಿಲಾನಿಯವರು ಯಶಸ್ವಿಯಾಗಿ ಕ್ರೀಡಾಕೂಟವನ್ನು ನಡೆಸಿಕೊಟ್ಟರು. ಅನಿಲ್ ಕುಮಾರ್ ಹೆಚ್. ಶೆಟ್ಟರ್ ಅವರು ಇಡೀ ಕಾರ್ಯಕ್ರಮವನ್ನು ನಿರೂ