ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.೨ರಂದು ಬೆಳಿಗ್ಗೆ ೧೦.೩೦ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹೆಚ್.ಸಿ. ಯೋಗೀಶ್ ತಿಳಿಸಿದರು.

ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಂ. ಚಂದ್ರಶೇಖರಪ್ಪ ಅವರು ಜುಲೈ ೨೬ರಂದು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕೃಷಿ ಕುಟುಂಬದಲ್ಲಿ ಜನಿಸಿದ ಚಂದ್ರಶೇಖರಪ್ಪ ಅವರು ಬಳಿಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದರು. ಇಂದಿರಾ ಗಾಂಧಿ ಅವರು ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ತರೀಕೆರೆಯಲ್ಲಿ ಉಸ್ತುವಾರಿ ವಹಿಸಿದ್ದರು. ಪಕ್ಷದಲ್ಲಿ ಕೆಳಹಂತದಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಶಾಸಕ ಸ್ಥಾನಕ್ಕೇರಿದ್ದರು. ಎಲ್ಲ ಸಮುದಾಯಗಳೊಂದಿಗೆ ಅವರು ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದರು.

ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ತರಳಬಾಳು ಜಗದ್ಗುರು ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುತ್ತೂರಿನ ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹಾಗೂ ಆನಂದಪುರದ ಶ್ರೀ ಮುರುಘಾ ಮಠ-ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಚಿಕ್ಕಮಗಳೂರಿನ ಬಸವತತ್ವ ಪೀಠ-ಶಿವಮೊಗ್ಗದ ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಹಾಗೂ ಹೊನ್ನಾಳಿಯ ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಸಮಿತಿಯ ಮೌಲಾನಾ ಶಾಹುಲ್ ಹಮೀದ್ ಮದನಿ, ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಪ್ರಧಾನ ದೇವಾಲಯದ ಫಾದರ್ ಸ್ಟಾನಿ ಡಿಸೋಜ ಹಾಗೂ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಾಕುಮಾರಿ ಅನಸೂಯ ಉಪಸ್ಥಿತರಿರುವರು. ಖ್ಯಾತ ಹಿಂದೂಸ್ಥಾನಿ ಗಾಯಕ ಶರಣ ಹುಮಾಯೂನ್ ಹರ್ಲಾಪುರ ಅವರಿಂದ ವಚನ ಗಾಯನ ನಡೆಯಲಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿ?ತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ, ಸಾಗರ ಶಾಸಕ ಗೋಪಾಲಕೃ? ಬೇಳೂರು, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿ?ತ್ ಸದಸ್ಯ ಡಿ.ಎಸ್. ಅರುಣ್, ವಿಧಾನ ಪರಿ?ತ್ ಸದಸ್ಯೆ ಬಲ್ಕೀಸ್ ಬಾನು, ಮಾಜಿ ಸಂಸದ ಆಯನೂರು ಮಂಜುನಾಥ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ, ವಿಧಾನ ಪರಿ?ತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ವಿಧಾನ ಪರಿ?ತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ವಿಧಾನ ಪರಿ?ತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಇಸ್ಮಾಯಿಲ್ ಖಾನ್, ಮಧು, ಜ್ಯೋತಿ ಅರಳಪ್ಪ, ಶಿವಪ್ಪ, ಶಿವಕುಮಾರ್ ಇದ್ದರು.