ಶಿವಮೊಗ್ಗ,ಸೆ.29: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ಸಹಯೋಗದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾರಶೆಟ್ಟಿಹಳ್ಳಿ ಮರಾಠ ಸಮುದಾಯ ಭವನದಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಭಾಗವಹಿಸಿ, ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ಇಂತಹ ಸರ್ಕಾರಿ ಯೋಜನೆಗಳು ಸಹಕಾರಿಯಾಗಲಿವೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮರಾಠ ಸಮುದಾಯದ ಮುಖಂಡರು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.