ಶಿವಮೊಗ್ಗ: ಅ.07 (: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು,

ಅ.08 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ

ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ

ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.