ಶಿವಮೊಗ್ಗ, ಅ.08: ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-

ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:13.10.2026 ಹಾಗೂ 20.10.2026 ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ

ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.