ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಸಿ.ಜಿ. ಮಧುಸೂದನ್ ಅವರು ಇಂದು ಬೆಂಗಳೂರಿನ ನನ್ನ ಗೃಹ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ, ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

ಮಧುಸೂದನ್ ಅವರ ನಾಯಕತ್ವದಲ್ಲಿ ಶಿವಮೊಗ್ಗ–ಭದ್ರಾವತಿ ಅವಳಿ ನಗರಗಳು ಸುಸಂಘಟಿತ ನಗರಾಭಿವೃದ್ಧಿ, ಅತ್ಯಾಧುನಿಕ ಮೂಲಸೌಕರ್ಯ ಹಾಗೂ ಸಮಗ್ರ ಪ್ರಗತಿಯ ಮೂಲಕ ಹೊಸ ಎತ್ತರವನ್ನು ತಲುಪಲಿ ಎಂದು ಹಾರೈಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎಷ್ಟು ಬಲವಾಗಿ ಸಂಘಟಿಸಿ ಬೆಳೆಸುತ್ತೀರೋ, ಅಷ್ಟು ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ರಾಹುಲ್ ಗಾಂಧಿ ಅವರು ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಯುವಕರು ಹೆಚ್ಚಿನ ಶಕ್ತಿ ತುಂಬಬೇಕು.

ಯುವಕರಿಗೆ ಅಧಿಕಾರ ಮತ್ತು ಜವಾಬ್ದಾರಿಗಳನ್ನು ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯವಾಗಿದೆ. ಈ ಆಶಯಕ್ಕೆ ತಕ್ಕಂತೆ ಯುವ ನಾಯಕರು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಮಧುಸೂದನ್ ಅವರಿಗೆ ತಿಳಿಸಿ ಪ್ರೋತ್ಸಾಹಿಸಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಆರ್. ಪ್ರಸನ್ನ ಕುಮಾರ್, ಕರ್ನಾಟಕ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹರ್ಷಿತ್ ಗೌಡ, ನಗರ ಅಧ್ಯಕ್ಷರಾದ ಶ್ರೀ ಚರಣ್ ಶೆಟ್ಟಿ, ಎನ್ಎಸ್ಯುಐ ಜಿಲ್ಲಾಧ್ಯಕ್ಷರಾದ ಶ್ರೀ ವಿಜಯ್ ಕುಮಾರ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶ್ರೀಜಿತ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.