ಇನ್ಸ್ಪೆಕ್ಟರ್ ಆರ್.ಆರ್. ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ

ಶಿಕಾರಿಪುರ: ಸಾರ್ವಜನಿಕರೊಬ್ಬರು ಕಳೆದುಕೊಂಡಿದ್ದ ಮೊಬೈಲ್ ಫೋನ್ ಅನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚುವಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ಗಾಗಿ ಪೊಲೀಸರು ತಾಂತ್ರಿಕ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ, CEIR ಪೋರ್ಟಲ್ ಮೂಲಕ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ನಂತರ ಮೊಬೈಲ್ ಫೋನ್ ಅನ್ನು ಅದರ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಸಾರ್ವಜನಿಕರ ಆಸ್ತಿಯನ್ನು ಮರಳಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಎಸ್ಪಿ ನಿಖಿಲ್ ಬಿ ಅವರ ಮಾಗದರ್ಶನದಲ್ಲಿ ,ಎಎಸ್ ಪಿ ಹಾಗೂ ಡಿವೈಎಸ್ ಪಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆರ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕಳೆದುಹೋದ ಮೊಬೈಲ್ಗಳನ್ನು ಪತ್ತೆಹಚ್ಚಲು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿರುವ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.