ಶಿವಮೊಗ್ಗ: ಇಂದು ನಗರದ ಗೋಪಿ ಸರ್ಕಲ್ ನಿಂದ ವೀರಶೈವ ಕಲ್ಯಾಣ ಮಂದಿರದ ವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು.


ಪರಿಸರ ದಸರಾ ಆಚರಣೆ ಹಿನ್ನೆಲೆಯಲ್ಲಿ ಸದರಿ ರಸ್ತೆಯನ್ನು ವಾಹನ ಮುಕ್ತ ವಲಯವನ್ನಾಗಿ ಘೋಷಿಸಲಾಗಿದ್ದರಿಂದ ಈ ರಸ್ತೆಯ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿತ್ತು. ಯಾವುದೇ ವಾಹನಗಳಿಗೂ ಸಂಚಾರಕ್ಕೆ ಅವಕಾಶ ನೀಡದೆ ಪೋಲಿಸರು ಕಟ್ಟು ನಿಟ್ಟಿನ ನಿಯಮ ಪಾಲನೆ ಮಾಡಿದ್ದರು.

ವಾಹನ ಮುಕ್ತ ವಲಯ ಘೋ?ಣೆ ಕುರಿತು ತಮಗೆ ಗೊತ್ತಿಲ್ಲ ಎಂದು ಸಾರ್ವಜನಿಕರು ಹೇಳಿದರೆ, ಪತ್ರಿಕೆಗಳಲ್ಲಿ ಈ ಕುರಿತು

ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗಿತ್ತು ಎಂದು ಪೊಲೀಸರು ಸಮಜಾಯಿಷಿ ನೀಡುತ್ತಿದ್ದುದು ಕಂಡು ಬಂತು. ಈ ಸಂದರ್ಭದಲ್ಲಿ ಪೋಲಿಸರ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆಯಿತು