ಶಿವಮೊಗ್ಗ: ಶಿವಮೊಗ್ಗದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ವಕೀಲರ ನ್ಯಾಯಯುತ ಬೇಡಿಕೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಘೋಷಿಸಿದರು.

ನಗರದ ವಕೀಲರ ಭವನದ ಸಮೀಪ ಶಿವಮೊಗ್ಗ ವಕೀಲರ ಸಂಘದ ವತಿಯಿಂದ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ನಡೆಯುತ್ತಿರುವ ಎರಡನೇ ಹಂತದ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂದು ರೈತ ಸಂಘ ಈ ಹಿಂದೆಯೂ ಹಲವು ಹೋರಾಟಗಳನ್ನು ನಡೆಸಿ ಒತ್ತಾಯಿಸಿದೆ. ಈ ಭಾಗದ ಜನರಿಗೆ ನ್ಯಾಯದಾನ ವ್ಯವಸ್ಥೆ ಮತ್ತ? ಸುಲಭವಾಗಿ ತಲುಪಬೇಕು ಎಂಬ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಕೀಲರ ಸಂಘ ನಡೆಸುತ್ತಿರುವ ಹೋರಾಟಕ್ಕೆ ರೈತ ಸಂಘದ ಸಂಪೂರ್ಣ ಬೆಂಬಲವಿದೆ ಎಂದು ಅವರು ತಿಳಿಸಿದರು.

ಧರಣಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಪಿ.

ಶೇಖರಪ್ಪ, ಜಿಲ್ಲಾ ಹಸಿರುಸೇನೆ ಸಂಚಾಲಕ ಎಂ.ಡಿ. ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಜಿ.ಎನ್. ಪಂಚಾಕ್ಷರಿ, ಮುಖಂಡರಾದ ಎಚ್.ಎಸ್. ಶೇಖರಪ್ಪ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.