ಶಿವಮೊಗ್ಗ, ಅ.15: ಶಿವಮೊಗ್ಗ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 11

ಕಾರ್ಯಕರ್ತೆಯರ ಮತ್ತು 15 ಸಹಾಯಕಿಯರ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು

ಅ.29 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ

ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.