ಶಿವಮೊಗ್ಗ:
ಮಾನಸಿಕ ಅಸ್ವಸ್ಥ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಲ್ಲದೆ, ಅಪರಾಧಿಗೆ ₹50 ಸಾವಿರ ದಂಡ ವಿಧಿಸಿದ್ದು, ನೊಂದ ಬಾಲಕಿಗೆ ₹40 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ.

ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ:
ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

ಮಾನಸಿಕ ಅಸ್ವಸ್ಥ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಸಂಬಂಧ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಸಬ್ಇನ್ಸ್ಪೆಕ್ಟರ್ ರಾಜುರೆಡ್ಡಿ ಅವರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಜೊತೆಗೆ ನೊಂದ ಬಾಲಕಿಗೆ ₹40 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ.