ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ಸ್ಟಿಂಗ್ ಆಪರೇಷನ್ ಮಾಡಬೇಕಿತ್ತೇ? ಒಬ್ಬ ಮುಖ್ಯಮಂತ್ರಿಯನ್ನು

ಬದಲಿಸುವ ವಿಚಾರದಲ್ಲಿ ರಾಜ್ಯದ ಮರ್ಯಾದೆಯನ್ನು ದೇಶದ ಮುಂದೆ ಹರಾಜು ಹಾಕಬೇಕಿತ್ತೇ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಐವರು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ರಾಜ್ಯದ ನೈತಿಕತೆಯ ಬಗ್ಗೆ ಮುಖ್ಯಮಂತ್ರಿಗೆ ಕಲ್ಪನೆಯಿಲ್ಲವೇ ಎಂದು ಪ್ರಶ್ನಿಸಿದ ಅವರು,

ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕುತ್ತಿದ್ದವರು ಈಗ ಎಲ್ಲಿದ್ದಾರೆ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಿದ್ದರಾಮಯ್ಯ ಅವರತ್ತ ಗಮನಹರಿಸುತ್ತಿಲ್ಲ ಎಂದು ಟೀಕಿಸಿದರು.

ಈ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರ ಕೆಳಗಿಳಿಯಬೇಕು ಎಂದು ಒತ್ತಾಯಿಸಿದ ಅವರು, ಪೊಲೀಸ್ ಇಲಾಖೆಯ ಬಗ್ಗೆ ಗೌರವವಿದೆ. ಆದರೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.