ಹೊಳೆಹೊನ್ನೂರು: ಕರ್ನಾಟಕ ಸರ್ಕಾರ ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ *‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’* ಅಭಿಯಾನದಡಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು 2ನೇ ಹೋಬಳಿಯ ಆನವೇರಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಿತು

.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ವಿವಿಧ ಇಲಾಖೆಗಳ ಸೇವೆಗಳನ್ನು ತಲುಪಿಸುವ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ.

ಜನರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬ ಆಶಯದೊಂದಿಗೆ ಪ್ರಜಾಸೇವೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು