ಶಿವಮೊಗ್ಗ .ಅ 20 :ವಿಜಯದಶಮಿ ಹಬ್ಬದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.


ಪೊಲೀಸ್ ಠಾಣೆಯಲ್ಲಿನ ಶಸ್ತ್ರಾಸ್ತ್ರಗಳು, ಪೊಲೀಸ್ ವಾಹನಗಳು ಹಾಗೂ ಕರ್ತವ್ಯಕ್ಕೆ ಬಳಸುವ ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಂಪ್ರದಾಯಿಕವಾಗಿ ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕುಟುಂಬ ಸಮೇತರಾಗಿ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಎಸ್ಪಿ ನಿಖಿಲ್ ಬಿ, ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ., ಎಎಸ್ಪಿ, ಡಿವೈಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಯು ಸಾರ್ವಜನಿಕರ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪರಾಧ ನಿಯಂತ್ರಣದಂತಹ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದು, ಕರ್ತವ್ಯದ ಭಾಗವಾಗಿರುವ ಶಸ್ತ್ರಾಸ್ತ್ರಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯನ್ನು ಆಚರಿಸಲಾಯಿತು.

ಕುಟುಂಬ ಸದಸ್ಯರು ಕೂಡ ಭಾಗವಹಿಸಿದ ಆಯುಧ ಪೂಜೆಯು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು. ಈ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.