ಶಿವಮೊಗ್ಗ, ಅ.23 :ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ವಾರಸುದಾರರು ಪತ್ತೆಯಾಗದ 88 ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆದೇಶದಂತೆ

ಅ. 28 ರಂದು ಬೆಳಿಗ್ಗೆ 09-00ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ.

ಆಸಕ್ತರು ನಿಗದಿತ ಅವಧಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ

ಪಾಲ್ಗೊಳ್ಳುವಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.