ಶಿವಮೊಗ್ಗ: ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್ಪಾತ್ ಅತಿಕ್ರಮಣದ ವಿರುದ್ಧ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ, ವಿನೋಬಾ ನಗರದಲ್ಲಿ ಫುಟ್ಪಾತ್ಗಳನ್ನು ಆಕ್ರಮಿಸಿಕೊಂಡಿದ್ದ ತರಕಾರಿ ಅಂಗಡಿಗಳನ್ನು ತೆರವುಗೊಳಿಸಿದರು.


ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಿ, ಮತ್ತೆ ಅತಿಕ್ರಮಣ ಮಾಡದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಲಾಯಿತು.

ಸಾರ್ವಜನಿಕರಿಗೆ ಹಲವು ಬಾರಿ ಸೂಚನೆ ನೀಡಿದ್ದರೂ ಫುಟ್ಪಾತ್ ಅತಿಕ್ರಮಣ ಮುಂದುವರಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಕಾರ್ಯಾಚರಣೆ ನಡೆಸಲಾಗಿದೆ.

ವಿನೋಬಾ ನಗರ ಹಾಗೂ ಶಿವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫುಟ್ಪಾತ್ಗಳು ಸಾರ್ವಜನಿಕರ ಬಳಕೆಗೆ ಮುಕ್ತವಾಗಬೇಕು ಎಂಬ ಉದ್ದೇಶದಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದು, ಪಾದಚಾರಿಗಳ ಹಿತದೃಷ್ಟಿಯಿಂದ ಫುಟ್ಪಾತ್ ಅತಿಕ್ರಮಣಕ್ಕೆ ಕಡಿವಾಣ ಹಾಕುವ ಪೊಲೀಸರ ಕಾರ್ಯಾಚರಣೆ ಸಾರ್ವಜನಿಕರ ಗಮನ ಸೆಳೆದಿದೆ.