ಶಿವಮೊಗ್ಗ,ಅ.30:
ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 36 ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ, ವಿಶೇಷವಾಗಿ ಎರಡು ದಿನ ಆಚರಿಸಲು ಶ್ರೀಆದಿಚುಂಚನಗಿರಿ ಮಠ ತೀರ್ಮಾನಿಸಿದೆ.
ಈ ಬಾರಿಯೂ ಸಹ ದಾಸವರೇಣ್ಯ ಪುರಂದದಾಸರ ಕೀರ್ತನೋತ್ಸವ ಸಮಾರಂಭವನ್ನು ದಾಸ ಶ್ರೇಷ್ಠ ಪುರಂದರ ದಾಸರ ಹುಟ್ಟೂರಾದ ಆರಗದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಶಿವಮೊಗ್ಗದ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ 4 ಮತ್ತು 5 ರಂದು ವಿಶೇಷ ಕಾರ್ಯಕ್ರಮಗಳನ್ನು ಶ್ರೀ ಮಠದಿಂದ ಆಯೋಜಿಸಲಾಗಿದೆ.
ನವೆಂಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗ ಸಮುದಾಯಗಳ ರಾಜ್ಯ ಮಟ್ಟದ ವಧು-ವರರ ಸಮಾವೇಶ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ

ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ನವೆಂಬರ್ 4 ರಂದು ಸಂಜೆ 4 ರಂದು ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿರುವ ಸಹಕಾರ ಸಂಘ ಸಭಾ ಭವನದಲ್ಲಿ ದಾಸವರೇಣ್ಯ ಪುರಂದರದಾಸರ ಕೀರ್ತನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.

*ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ*: ನ.5 ರ ಬೆಳಗ್ಗೆ 09:30 ಗಂಟೆಗೆ ಶ್ರೀಮಠದ 36 ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಲೆಕ್ಕ ಪರಿಶೋಧಕ ವಿಭಾಗದಲ್ಲಿ ಸಾಧನೆ ಮಾಡಿರುವ ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು.

ನವೆಂಬರ್ 5 ರಂದು ಬೆಳಿಗ್ಗೆ 7 ಗಂಟೆಗೆ ಶರಾವತಿ ನಗರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಹೋಮ – ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಶ್ರೀ ಮಠದ ಶಾಖೆಯ ಶ್ರೀಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು,
ಕಾರ್ಯಕ್ರಮಕ್ಕೆ ಸರ್ವರನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಸ್ವಾಗತಿಸಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
*ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿ* ನ. 4ರಂದು ನಡೆಯಲಿರುವ ವಿಶೇಷ, ವಿಭಿನ್ನವಾದ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಸಾಯಿಕೀರ್ತಿನಾಥ ಸ್ವಾಮೀಜಿ ಹಾಗೂ ನಾಡಿನ ಖ್ಯಾತ ಗಾಯಕರು ಆಗಮಿಸಿ ವಿವಿಧ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಖ್ಯಾತ ಸಂಗೀತಗಾರರಿಂದ ಸಾಮೂಹಿಕ ಗಾಯನ ಹಾಗೂ ಸತ್ಸಂಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು, ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.
*ವಿದ್ಯಾರ್ಥಿಗಳಿಗೆ ಪುರಂದರ ದಾಸರ ಕುರಿತು ವಿವಿಧ ಸ್ಪರ್ಧೆಗಳ ಆಯೋಜನೆ:*
36ನೇ ವಾರ್ಷಿಕೋತ್ಸವ ಪ್ರಯುಕ್ತ ಎರಡನೇ ಬಾರಿಗೆ ಶ್ರೀಮಠದಿಂದ ಕೀರ್ತನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ರಾಜ್ಯ ಮಟ್ಟದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜಿನ 19 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ದಾಸವರೇಣ್ಯ ಪುರಂದರ ದಾಸರ ಕೀರ್ತನೆಗಳ ಸಮೂಹ ಗಾಯನ ಸ್ಪರ್ಧೆಯನ್ನು ನವೆಂಬರ್ 3 ರಂದು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು, ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತಿನಿಂದ ಅತ್ಯುತ್ತಮ ಪ್ರದರ್ಶನ ನೀಡಿದ 10 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ.ಅಂತಿಮ ಸುತ್ತಿನಲ್ಲಿ ಪ್ರಥಮ,ದ್ವಿತೀಯ,ಮತ್ತು ತೃತೀಯ ಬಹುಮಾನಗಳ ಜೊತೆಗೆ ಏಳು ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ, ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿ ಶ್ರೀಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಗುವುದು.
ಮಾಧ್ಯಮದ ಎಲ್ಲಾ ಆತ್ಮೀಯರು ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಶ್ರೀ ಮಠದ ಕಾರ್ಯಕ್ರಮಕ್ಕೆ ಸೂಕ್ತ ಪ್ರಚಾರ ನೀಡುವಂತೆ ವಿನಂತಿಸುತ್ತೇವೆ. ವಿವರಕ್ಕೆ 9113988368
ವಂದನೆಗಳೊಂದಿಗೆ,