ಶಿವಮೊಗ್ಗ, ಅ.೩೦:* ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ ೧ ರಂದು ಎಸ್ಐಆರ್ ವಿರೋಧಿಸಿ ಮತ್ತು ವೋಟ್ ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ??ಯಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ಸುಮಾರು ೫೦೦ಕ್ಕೂ ಹೆಚ್ಚು ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಜಿ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಮಾವೇಶ ಕೇವಲ ಕಾಂಗ್ರೆಸ್ ಸಮಾವೇಶವಲ್ಲ, ದೇಶದ ಪ್ರಜಾಪ್ರಭುತ್ವ ಉಳಿಸುವ ಹೋರಾಟವಾಗಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುವ ಈ ಹೋರಾಟದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸುಮಾರು ೨೩ ಪಕ್ಷಗಳ ಮುಖಂಡರಾದ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್ ಸೇರಿದಂತೆ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು ೧೦ ರಿಂದ ೧೫ ಲಕ್ಷ ಜನರು, ಹೋರಾಟಗಾರರು, ಕಾರ್ಮಿಕ ಸಂಘಟನೆಗಳು, ರೈತರು, ವಿದ್ಯಾರ್ಥಿಗಳು, ಯುವಕ-ಯುವತಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
“ಇವತ್ತು ವೋಟ್ ಕಳ್ಳತನ ಮಾಡಿಕೊಂಡು ಚುನಾವಣಾ ಆಯೋಗ ದೇಶವನ್ನು ಲೂಟಿ ಮಾಡುತ್ತಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಬಿಜೆಪಿಗೆ ನಾಚಿಕೆ ಆಗಬೇಕು. ಇವಿಎಂ ದುರುಪಯೋಗ, ವೋಟ್ ಚೋರಿ ವಿರುದ್ಧ ಸುಪ್ರೀಂ ಕೋರ್ಟ್ ಕೂಡ ನಮ್ಮ ಹೋರಾಟದ ಪರವಾಗಿ ನಿಂತಿದೆ” ಎಂದು ಸುಂದರೇಶ್ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ತಾವೇ ೧೦ ಸಾವಿರ ಜನರನ್ನು ಕರೆದುಕೊಂಡು ಹೋಗಿದ್ದೆವು. ಅದರ ಫಲವಾಗಿಯೇ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ಅದೇ ರೀತಿ ನಾಡಿದ್ದು ನಡೆಯುವ ದೆಹಲಿ ??ಯಾಲಿಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಾದ ಸಂಗಮೇಶ್, ಗೋಪಾಲಕೃ?, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿ ಕನಿ? ೫೦೦ ಜನರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾಜಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಪೊರೇ?ನ್, ಮುನ್ಸಿಪಾಲಿಟಿ ಸದಸ್ಯರು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳು ಕೂಡ ಈ ??ಯಾಲಿಯಲ್ಲಿ ಭಾಗವಹಿಸಿ ಬಂದ ಫೋಟೋಗಳನ್ನು ಅರ್ಜಿಯೊಂದಿಗೆ ಲಗತ್ತಿಸಿದರೆ ಉತ್ತಮ ತೂಕ ಸಿಗುತ್ತದೆ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ??ಯಾಲಿಗೆ ಕರೆ ನೀಡಿದ್ದಾರೆ. ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಹಾಲಿ, ಮಾಜಿ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಭಾಗವಹಿಸಬೇಕು, ಸಚಿವರು, ಶಾಸಕರು ಇದಕ್ಕೆ ಸಹಕಾರ ನೀಡಬೇಕು ಎಂದು ಸುಂದರೇಶ್ ಮನವಿ ಮಾಡಿದರು.