ಶಿವಮೊಗ್ಗ,ಅ.30:
2026ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದ್ದು, ಇದರಲ್ಲಿ ಶಿವಮೊಗ್ಗ ಜಿಲ್ಲೆಯಿಂದ

ಸಾಮಾಜಿಕ ಸೇವೆ ವಿಭಾಗದಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ಲಭಿಸಿದೆ.

ಈ ಬಾರೀ ಒಟ್ಟು 71 ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಶಿವಮೊಗ್ಗದ ಕಾಗೋಡು ತಿಮ್ಮಪ್ಪ ಅವರಿಗೆ ಈ ಪ್ರಶಸ್ತಿ ಈ ಬಾರಿ ಲಭ್ಯವಾಗಿದೆ.

ಎಲ್ಲ ವಿಭಾಗಗಳ ಸಾಧನೆಯ ಆಧಾರದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು
, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಲಾ ಅವರು ಆದೇಶವನ್ನು ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.