ಗಾಡಿಕೊಪ್ಪದಲ್ಲಿ ಮಹಾನಗರ ಪಾಲಿಕೆಗೆ ಸೇರಿದ ಹಳೆಯ ಮಳಿಗೆಯ ಜಾಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಯುವನಾಯಕ ಕಾಂತೇಶ್ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹಳೆಯ ಮಳಿಗೆಯ ಜಾಗದ ಸಮಗ್ರ ಅಭಿವೃದ್ಧಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಪಾಲಿಕೆಗೆ ಸೇರಿದ ಜಾಗವನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳುವ ಕುರಿತು ಚರ್ಚಿಸಲಾಯಿತು.

ಸ್ಥಳೀಯ ಜನರ ಅಗತ್ಯತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗಾಡಿಕೊಪ್ಪ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ಸ್ಥಳ ಪರಿಶೀಲನೆ ಮಹತ್ವ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.