ಶಿವಮೊಗ್ಗ: ಹಾಲಿನ ದರ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದ ಮಹಿಳಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಗರದ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಹಾಲಿನ ದರ ಏರಿಕೆಯಿಂದ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರ ಕೂಡಲೇ ಏರಿಕೆ ಮಾಡಿರುವ ಹಾಲಿನ ದರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ರಾ?ಭಕ್ತರ ಬಳಗದ ಮಹಿಳಾ ಘಟಕದ ಕಾರ್ಯಕರ್ತರು ಸೇರಿದಂತೆ ಹಲವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋ?ಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳದಲ್ಲಿಯೇ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಲಾಯಿತು.

ಮಕ್ಕಳಿಗೆ ಹಾಲು ನೀಡುವ ಮೂಲಕ ಪ್ರತಿಭಟನೆ.

ಸಾಮಾನ್ಯ ಜನರ ಜೇಬಿಗೆ ಕನ್ನ ಹಾಕುತ್ತಿದೆ ಸರ್ಕಾರ : ಕೆ.ಎಸ್. ಈಶ್ವರಪ್ಪ
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ಬೆಲೆ ಏರಿಕೆ ಕ್ರಮಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸರ್ಕಾರ ಹಾಲು, ಮೊಸರು, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿದ್ದು, ಸಾಮಾನ್ಯ ಜನರ ಜೇಬಿಗೆ ಕನ್ನ ಹಾಕುತ್ತಿದೆ ಎಂದು ಆರೋಪಿಸಿದರು. ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಅಗತ್ಯ ವಸ್ತುಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಬೆಲೆ ಏರಿಕೆ ಮೂಲಕ ಜನರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಟೀಕಿಸಿದರು.
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಜನರಿಗೆ ನಿಜವಾಗಿಯೂ ಇ?ವಾಗಿದ್ದರೆ, ಜನರು ಸರ್ಕಾರದ ಪರವಾಗಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಹೋಗಲಿ. ಜನರು ಯೋಜನೆಗಳನ್ನು ಮೆಚ್ಚಿದ್ದಾರೆಯೇ ಅಥವಾ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆಯೇ ಎಂಬುದು ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಸವಾಲು ಹಾಕಿದರು.

ಬಸ್ ದರ ಏರಿಕೆ ಸೇರಿದಂತೆ ವಿವಿಧ ಬೆಲೆ ಏರಿಕೆಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರದ ಬಳಿ ಹಣವಿಲ್ಲ ಎಂಬ ಹೇಳಿಕೆಗಳು ಆಡಳಿತ ನಡೆಸುವ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮೂಡಿಸುತ್ತವೆ. ಸರ್ಕಾರ ತನ್ನ ಯೋಜನೆಗಳ ಬಗ್ಗೆ ವಿಶ್ವಾಸ ಹೊಂದಿದ್ದರೆ, ಜನರ ಮುಂದೆ ಹೋಗಿ ಚುನಾವಣೆಯನ್ನು ಎದುರಿಸಲಿ. ಜನರು ಯೋಜನೆಗಳನ್ನು ಮೆಚ್ಚಿದ್ದರೆ ಮತ್ತೆ ಅಧಿಕಾರಕ್ಕೆ ಬರಬಹುದು. ಆದರೆ, ಜನರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರ ಕೂಡಲೇ ಹಾಲಿನ ದರ ಹಾಗೂ ಬಸ್ ಟಿಕೆಟ್ ಬೆಲೆ ಏರಿಕೆ ಬೆಲೆಯನ್ನು ಕಡಿಮೆ ಮಾಡಬೇಕು. ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುವುದನ್ನು ನಿಲ್ಲಿಸಬೇಕು. ಮಹಿಳೆಯರು ಸೇರಿದಂತೆ ಸಾರ್ವಜನಿಕರು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಜನರ ಅಸಮಾಧಾನವನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಇನ್ನ? ದೊಡ್ಡ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಹಿಳೆಯರು ಮಕ್ಕಳೊಂದಿಗೆ ಆಗಮಿಸಿ ಹಾಲಿನ ಪ್ಯಾಕೆಟ್ ಅನ್ನು ಕೈಯಲ್ಲಿ ಹಿಡಿದು ದೈವಜ್ಞ ವೃತ್ತದಿಂದ ಗೋಪಿವೃತ್ತದ ವರೆಗೆ ಮೆರವಣಿಗೆ ನಡೆಸಿ ದರ ಏರಿಕೆಯನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಇ.ಕಾಂತೇಶ್, ಮಾಜಿ ಮೇಯರ್ ಸುವರ್ಣ ಶಂಕರ್, ಪ್ರಮುಖರಾದ ಲಕ್ಷ್ಮೀಶಂಕರ್ ನಾಯ್ಕ್, ಲತಾ ಗಣೇಶ್, ಕೆಂಪಮ್ಮ, ಸೀತಾಲಕ್ಷ್ಮೀ, ಅನಿತಾ, ಆರತಿ ಪ್ರಕಾಶ್, ಈ.ವಿಶ್ವಾಸ್, ಮೋಹನ್ ಜಾಧವ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಇದ್ದರು.