
ಶಿವಮೊಗ್ಗ,ನ.06:
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.

2026ರ ಜನವರಿಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಅವರು, ಇದೀಗ ಸರ್ಕಾರದ ಆಡಳಿತಾತ್ಮಕ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಇನ್ನು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
