ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಮೀಸಲಿಟ್ಟಿರುವ ಸ್ಥಳಗಳನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿರುವ ಕುರಿತು ಪರಿಶೀಲನೆ ನಡೆಸಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ.

ದಿನಾಂಕ 06-11-2026ರಂದು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಖುದ್ದಾಗಿ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಆಸ್ಪತ್ರೆಗಳ ಕಟ್ಟಡಗಳಿಗೆ ಅನುಮೋದನೆ ಪಡೆದಿರುವ ನಕ್ಷೆಯ ಪ್ರಕಾರ

ವಾಹನಗಳ ನಿಲುಗಡೆಗೆ ಮೀಸಲಿಟ್ಟಿರುವ ಸ್ಥಳಗಳನ್ನು ಪರಿಶೀಲಿಸಲಾಯಿತು.

ಈ ವೇಳೆ ಕಟ್ಟಡದ ಅನುಮೋದಿತ ನಕ್ಷೆಯಲ್ಲಿ ವಾಹನಗಳ ಪಾರ್ಕಿಂಗ್ಗಾಗಿ ಮೀಸಲಿಟ್ಟಿರುವ ಸ್ಥಳವನ್ನು ಕಡ್ಡಾಯವಾಗಿ ವಾಹನಗಳ ನಿಲುಗಡೆಗಾಗಿಯೇ ಬಳಸಬೇಕು. ಯಾವುದೇ ಕಾರಣಕ್ಕೂ ಸದರಿ ಸ್ಥಳವನ್ನು ಬೇರೆ ವ್ಯಾಪಾರ, ವಾಣಿಜ್ಯ ಅಥವಾ ಇತರೆ ಚಟುವಟಿಕೆಗಳಿಗೆ ಬಳಸಬಾರದು ಎಂದು ಆಸ್ಪತ್ರೆಗಳ ಆಡಳಿತ ಮಂಡಳಿಗೆ ಸ್ಪಷ್ಟ ಸೂಚನೆ ನೀಡಲಾಯಿತು.