ಶಿವಮೊಗ್ಗ: ಹಾಲಿನ ದರ ಏರಿಕೆಯ ರಾಜ್ಯ ಸರ್ಕಾರದ ನಿರ್ಧಾರವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರು ಸಮರ್ಥಿಸಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ರೈತರ ಹಿತಾಸಕ್ತಿಗೆ ಧಕ್ಕೆ ತರುವಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ವಿಪಕ್ಷಗಳು ನಿಲ್ಲಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಿಸಿರುವುದನ್ನೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಿ ವಿಪಕ್ಷಗಳು ಟೀಕಿಸುತ್ತಿವೆ. ವಾಸ್ತವವಾಗಿ ಇಂತಹ ಹೇಳಿಕೆಗಳ ಮೂಲಕ ವಿಪಕ್ಷಗಳು ತಮ್ಮ ರೈತ ವಿರೋಧಿ ಮನೋಭಾವವನ್ನು ಪ್ರದರ್ಶಿಸುತ್ತಿವೆ ಎಂದು ಕಿಡಿಕಾರಿದರು.

ಹಾಲು ಉತ್ಪಾದಕರು ಎದುರಿಸುತ್ತಿರುವ ಸಂಕ?ಗಳು ವಿಪಕ್ಷಗಳಿಗೆ ಅರ್ಥವಾಗುತ್ತಿಲ್ಲ. ಹಾಲಿನ ದರ ಹೆಚ್ಚಳದಿಂದ ಉತ್ಪಾದಕರಿಗೆ ಆರ್ಥಿಕವಾಗಿ ಅನುಕೂಲವಾಗಿದ್ದು, ಅವರ ಆದಾಯದಲ್ಲಿ ಸುಧಾರಣೆ ಕಾಣಲು ಸಾಧ್ಯವಾಗಿದೆ. ರೈತರ ಬದುಕಿಗೆ ನೆರವಾಗುವ ಇಂತಹ ಕ್ರಮವನ್ನು ಸ್ವಾಗತಿಸುವ ಬದಲು ಅಪಪ್ರಚಾರ ಮಾಡುತ್ತಿರುವುದು ವಿಪಕ್ಷಗಳ ರೈತಪರ ಕಾಳಜಿಯ ಕೊರತೆಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಹೆಮ್ಮೆಯ ನಂದಿನಿ ಬ್ರಾಂಡ್ ಅಮೂಲ್ಗಿಂತಲೂ ಉತ್ತಮ ಗುಣಮಟ್ಟ ಹೊಂದಿದೆ. ರಾಜ್ಯಾದ್ಯಂತ ನಂದಿನಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದ್ದು, ದೇಶದ ಯಾವುದೇ ಬ್ರಾಂಡ್ಗೂ ಸಾಟಿಯಾಗದ ರೀತಿಯಲ್ಲಿ ನಂದಿನಿ ತನ್ನದೇ ಆದ ವಿಶ್ವಾಸಾರ್ಹತೆಯನ್ನು ಗಳಿಸಿದೆ ಎಂದು ಹೇಳಿದರು.

ಇದೇ ವೇಳೆ ಬೆಳೆ ವಿಮೆ ಗೊಂದಲಕ್ಕೆಪ್ರತಿಕ್ರಿಯಿಸಿದ ಅವರಯ,ಇತ್ತೀಚಿನ ದಿನಗಳಲ್ಲಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆ ಹಾನಿ ಸಂಭವಿಸುತ್ತಿದ್ದು, ರೈತರು ಸಂಕ?ಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಎರಡೂ ಸರ್ಕಾರಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಪತ್ತು ನಿರ್ವಹಣಾ ಕೇಂದ್ರಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಸಮರ್ಪಕವಾಗಿ ಗಮನಹರಿಸದಿರುವುದು ರೈತರಿಗೆ ಅನ್ಯಾಯವಾಗಲು ಕಾರಣವಾಗುತ್ತಿದೆ. ಅಧಿಕಾರಿಗಳು ಕೇವಲ ವರದಿಗಳಿಗೆ ಸೀಮಿತವಾಗದೆ, ಸ್ಥಳಮಟ್ಟದಲ್ಲಿ ರೈತರ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಒತ್ತಾಯಿಸಿದರು.
ರೈತರ ಹಿತಾಸಕ್ತಿ ಕಾಪಾಡುವುದು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿಧಿಗಳ ಆದ್ಯತೆಯಾಗಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರೈತರಿಗೆ ಅನುಕೂಲವಾಗುವ ನಿರ್ಧಾರಗಳನ್ನು ಕೈಗೊಳ್ಳಬೇಕು. ಬೆಳೆ ನ? ಅನುಭವಿಸಿದವರಿಗೆ ವಿಳಂಬವಿಲ್ಲದೆ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಆರ್.ಎಂ. ಮಂಜುನಾಥ್ ಗೌಡ ಹೇಳಿದರು.