
ಶಿವಮೊಗ್ಗ, ನ.17:
ಭಾರತೀಯ ಸಂಸ್ಕೃತಿಯಲ್ಲಿ ಕಲೆಗೆ ಮಾತ್ರವದ ಸ್ಥಾನವಿದೆ, ಭಾ – ಭಾವನೆಗಳು, ರ – ರಾಗ, ತ- ತಾಳ ಭಾವನೆಗಳ ಮುಖಾಂತರ ರಾಗ ಮತ್ತು ತಾಳಗಳನ್ನು ಜೋಡಿಸುವಂತ ಕೆಲಸ ಅದನ್ನು ನಾವು ನಮ್ಮ ದೇಶದಲ್ಲಿ ಹಿಂದಿನ ಕಾಲದಿಂದ ಇಂದಿನವರೆಗೂ ಕಾಣುತ್ತಾ ಇದ್ದೇವೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.
ಅವರು ಶಿವಮೊಗ್ಗ ಗುರುಪುರ ಹೊರ ವಲಯದ ಬಿಜಿಎಸ್ ಶಾಲಾ-ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ,ತಮ್ಮಲ್ಲಿರುವ ಕಲೆಯನ್ನು ವೇದಿಕೆಯಲ್ಲಿ ಇಂದು ಮಕ್ಕಳು ಕೊಡುಗೆಯಾಗಿ ಕೊಡುತ್ತ ಬಂದಿದ್ದಾರೆ. ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳುವಂಥ ಶಿಕ್ಷಣದ ವ್ಯವಸ್ಥೆ ನಮ್ನ ಮಕ್ಕಳಿಗೆ ಸಿಗುತ್ತಾ ಇದೆ. ಹಾಗಾಗಿ ನಮ್ಮ ಮಕ್ಕಳು ದಾರಿ ತಪ್ಪಲು ಸಾಧ್ಯವಿಲ್ಲ ಎಂದರು.


ಮಕ್ಕಳು ಕನಿಷ್ಠ ಪಕ್ಷ ದಿನಕ್ಕೊಮ್ಮೆಯಾದರೂ ಹಿರಿಯರನ್ನ, ಹೆತ್ತವರನ್ನು ಗೌರವಿಸುವುದನ್ನು, ನಮಸ್ಕರಿಸುವುದನ್ನು ಕಲಿಯಿರಿ, ಚೆನ್ನಾಗಿ ಓದಿ, ಸೋಮಾರಿತನ ಬಿಡಿ ಸಂಸ್ಕೃತಿ ಅರಿವು ನಿಮಗಿರಲಿ, ಮಕ್ಕಳಿಗೆ ಕಿವಿಮಾತು ಹೇಳಿದರು.
ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಪವನ್, ಪುನೀತ್ ಚಿಕ್ಕ ವಯಸ್ಸಿನಲ್ಲಿ ಅನೇಕ ರಾಷ್ಟ್ರಗಳಲ್ಲಿ, ಏಷ್ಯನ್ ಗೇಮ್ ಹಾಗೂ ಅಂತರಾಷ್ಟ್ರಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರ ಸಾಧನೆಯನ್ನು ಸ್ಮರಿಸಿಕೊಂಡರು.
ಶಿವಮೊಗ್ಗ ಶಾಸಕರಾದ ಎಸ್. ಎನ್.ಚನ್ನಬಸಪ್ಪ ಅವರು ಮಾತನಾಡುತ್ತಾ, ಗುರುಗಳಿದ್ದಾಗ ಮಾತ್ರ ಗುರಿ ತಲುಪಲು ಸಾಧ್ಯ. ನಮ್ಮ ಧರ್ಮ ಒಂದು ಮಹತ್ತರ ಮೈಲಿಗಲ್ಲನ್ನು ತಲುಪಿದೆ ಎಂದು ತಿಳಿಸಿದರು.

ತುಂಗಾತರಂಗ ವಾರ್ಷಿಕ ವಿಶೇಷಾಂಕದೊಡನೆ ಆದಿಚುಂಚನಗಿರಿ ಶ್ರೀಗಳು
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ,ಅದಕ್ಕೆ ಪೂರಕವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿ, ಶ್ರೀ ಮಠವು ದೇಶಕ್ಕೆ ಮಾದರಿಯಾಗಿದೆ ಎಂದರು.
ದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಆಗತ್ಯತೆ ಇದೆ. ಅಂತಹ ಕೆಲಸವನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಮಾಡುತ್ತಾ
ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿಯೂ ರಾಷ್ಟ್ರ, ಅಂತರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಮಾತನಾಡುತ್ತಾ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯೂ ಮಕ್ಕಳಿಗೆ ಶಿಕ್ಷಣದ ಜೊತೆಗೆ, ಒಳ್ಳೆಯ ಸಂಸ್ಕಾರವನ್ನು ಕೊಡುವಂತಹ ಸಂಸ್ಥೆಯಾಗಿದೆ.ನಿಮ್ಮ ಜೀವನದಲ್ಲಿ ನಿಮಗೆ ತಂದೆ-ತಾಯಿಗಳೇ ಶಕ್ತಿ ಮತ್ತು ಆಸರೆ ಹಾಗಾಗಿ ನಿಮ್ಮ ಈ ಒಂದು ಎರಡು ವರ್ಷ ಮೊಬೈಲ್,ರೀಲ್ಸ್, ಫೇಸ್ಬುಕ್,ಇನ್ಸ್ಟಾಗ್ರಾಮ್,ಸಾಮಾಜಿಕ ಜಾಲತಾಣಗಳಿಂದ ದೂರ ಇದ್ದರೆ ನಿಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.ಶ್ರೀ ಮಠ ಕಾಲೇಜು ವಿಭಾಗದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡೆಯನ್ನು ತುಂಬಾ ಅಚ್ಚುಕಟ್ಟಾಗಿ ಪೂಜ್ಯರ ಸಹಕಾರದಿಂದ ಆಯೋಜನೆ ಮಾಡಿರುವುದು ಸ್ತ್ಯಾಗನಿಯ ವಾದುದು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ .ಎಫ್. ಕುಟ್ರಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ನಿರ್ದೇಶಕರಗಳಾದ ಹಿರಿಯಣ್ಣ ಹೆಗಡೆ, ಕೊಳಿಗೆ ಡಿ. ವಾಸಪ್ಪಗೌಡ, ಅಣ್ಣಯ್ಯ ಡಿ, ರವೀಶ್ ಹೆಚ್, ಪ್ರಾಂಶುಪಾಲರು ಹಾಗೂ ಸಿಬ್ಬಂದಿಯ ವರ್ಗದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಾಲಾ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೂಜ್ಯರಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಕೊನೆಯಲ್ಲಿ ಬಿಜಿಎಸ್ ಕಲಾ ಸೌರಭ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.