ಶಿವಮೊಗ್ಗ: ಸಾರ್ವಜನಿಕರ ಕಣ್ಣಿನ ಆರೋಗ್ಯದ ದೃಷ್ಟಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ವತಿಯಿಂದ ಶಿವಮೊಗ್ಗದಲ್ಲಿ ನ.21ರ ಶನಿವಾರ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

40 ವರ್ಷ ಮೇಲ್ಪಟ್ಟವರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಕಣ್ಣಿನ ವಿವಿಧ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಈ ಶಿಬಿರ ಸಹಕಾರಿಯಾಗಲಿದೆ.

ಶಿಬಿರದಲ್ಲಿ ಕಣ್ಣಿನ ಪೊರೆ ಪರೀಕ್ಷೆ (Cataract Test), ರೆಟಿನಾ ಪರೀಕ್ಷೆ (Retina Test), ದೃಷ್ಟಿ ತೀಕ್ಷ್ಣತೆ ಪರೀಕ್ಷೆ (Visual Acuity Test), ಕಣ್ಣಿನ ದೃಷ್ಟಿ ಪರೀಕ್ಷೆ (Vision Test) ಹಾಗೂ ಕಾಂಟ್ಯಾಕ್ಟ್ ಲೆನ್ಸ್ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ತಪಾಸಣೆಗಳನ್ನು ನಡೆಸಲಾಗುತ್ತದೆ.

ಇಂದಿನ ಜೀವನಶೈಲಿ, ವಯೋಸಹಜ ಬದಲಾವಣೆ ಹಾಗೂ ಆರೋಗ್ಯದ ಸಮಸ್ಯೆಗಳಿಂದಾಗಿ ಹಲವರು ಕಣ್ಣಿನ ದೃಷ್ಟಿ ಸಂಬಂಧಿತ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ವಿಶೇಷವಾಗಿ 40 ವರ್ಷ ದಾಟಿದವರು ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ದೃಷ್ಟಿಯ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಮೊದಲೇ ಹೆಸರು ನೋಂದಾಯಿಸಿಕೊಳ್ಳುವ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಆಸಕ್ತರು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಲು 6362 85 4892 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.