ಶಿವಮೊಗ್ಗ: ರಾಜ್ಯದಲ್ಲಿ ಚಳಿಯ ನಡುವೆಯೇ ಬೀದಿಯಲ್ಲಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಿ, ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ಆಗ್ರಹಿಸಿದರು.ಧರಣಿ ನಿರತ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಳ, ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯೂ ಇಲ್ಲದ ಪರಿಸ್ಥಿತಿ ಇದೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಹಿಳೆಯರು ಇಂತಹ ಸಂಕಷ್ಟ ಎದುರಿಸುತ್ತಿರುವುದನ್ನು ಕಂಡಾಗ ನೋವಾಗುತ್ತದೆ ಎಂದರು.ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ₹5 ಸಾವಿರ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಆ ಭರವಸೆ ಈಡೇರಿಲ್ಲ ಎಂದು ಕಾರ್ಯಕರ್ತೆಯರು ಅಳಲು

ತೋಡಿಕೊಳ್ಳುತ್ತಿದ್ದಾರೆ. ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರಣಿ ಹಿಂಪಡೆಯುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಯಾವುದೇ ಭರವಸೆ ಅಥವಾ ಸೂಕ್ತ ನಿರ್ಧಾರವಿಲ್ಲದೆ ಧರಣಿ ಹಿಂಪಡೆಯುವುದು ಹೇಗೆ ಎಂದು ಪ್ರಶ್ನಿಸಿದರು.ಧರಣಿ ನಿರತ ಮಹಿಳೆಯರನ್ನು ಮೊದಲು
ಸ್ಥಳದಿಂದ ಎಬ್ಬಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕ್ರಮ ಕೈಗೊಂಡು, ಅವರಿಗೆ ಸಮಾಧಾನವಾಗುವ ನಿರ್ಧಾರ ಪ್ರಕಟಿಸಬೇಕು. ಕೇವಲ ಅಕ್ಕ-ತಂಗಿಯರು ಎಂದು ಮಾತಿನಲ್ಲಿ ಹೇಳುವುದರಿಂದ ಪ್ರಯೋಜನವಿಲ್ಲ. ಅವರ ಬೇಡಿಕೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.