ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯನಾಯ್ಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸೋಮವಾರ ತ್ಯಾಜವಳ್ಳಿಯ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ಗಳನ್ನು ವಿತರಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳೇ ದೇಶದ ಭವಿ?ವಾಗಿದ್ದು, ಶಿಕ್ಷಣ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಗ್ರಾಮೀಣ ಭಾಗದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಬೇಕು. ಆರ್ಥಿಕ ಪರಿಸ್ಥಿತಿ ಅಥವಾ ಇತರ ಯಾವುದೇ ಕಾರಣಗಳಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು. ವಿದ್ಯಾರ್ಥಿಗಳಿಗೆ ಅಗತ್ಯ ಪ್ರೋತ್ಸಾಹ ಮತ್ತು ನೆರವು ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹರಮಘಟ್ಟದ ಚನ್ನಪ್ಪ ಅವರಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶ್ರವಣ ಸಾಧನ ಯಂತ್ರವನ್ನು ವಿತರಿಸಲಾಯಿತು. ಶ್ರವಣದೋ? ಹೊಂದಿರುವವರಿಗೆ ಇಂತಹ ಸಹಾಯಕ ಸಾಧನಗಳು ದೈನಂದಿನ ಜೀವನದಲ್ಲಿ ಸಂವಹನ ನಡೆಸಲು ಹಾಗೂ ಸ್ವಾವಲಂಬನೆಯಿಂದ ಬದುಕಲು ನೆರವಾಗುತ್ತವೆ. ಅರ್ಹ ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಜೀವನಮಟ್ಟ ಸುಧಾರಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಹಾಗೂ ವಿಶೇ? ಚೇತನರಿಗೆ ಸಹಾಯಕ ಸಾಧನ ವಿತರಿಸುವಂತಹ ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸಿರುವುದು ಕಾರ್ಯಕ್ರಮದ ವಿಶೇ?ವಾಗಿತ್ತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.