ರಾಜ್ಯಮಟ್ಟದ ಕರಾಟೆಯಲ್ಲಿ ಅಕ್ಷಯ್ಗೆ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ
ಶಿವಮೊಗ್ಗ: ದೇವನಹಳ್ಳಿಯಲ್ಲಿ ನಡೆದ ಶಾಲಾ ಕ್ರೀಡಾಕೂಟ ಒಕ್ಕೂಟದ (ಎಸ್ಜಿಎಫ್ಐ) ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಗರದ ಅಸ್ಟ್ರಾ ಸ್ಪೋರ್ಟ್ಸ್ ಅಕಾಡೆಮಿಯ ಗುರುಪುರ ಶಾಖೆಯ

ಕ್ರೀಡಾಪಟು ಅಕ್ಷಯ್.ಜಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21 ಮತ್ತು 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಪಂದ್ಯಾವಳಿಯ 14 ವರ್ಷದೊಳಗಿನ ಬಾಲಕರ 20 ಕೆ.ಜಿ. ವಿಭಾಗದಲ್ಲಿ ಅಕ್ಷಯ್ ಪ್ರಥಮ

ಸ್ಥಾನ ಪಡೆದಿದ್ದಾರೆ. ಡಿಸೆಂಬರ್ನಲ್ಲಿ ಪಂಜಾಬ್ನ ಲೂಧಿಯಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್ಜಿಎಫ್ಐ ಕರಾಟೆ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಹೇಳಿದರು.

ಅ.14ರಂದು ಶಿವಮೊಗ್ಗದಲ್ಲಿ ನಡೆದ ತಾಲ್ಲೂಕು ಮಟ್ಟದ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ಅಕ್ಷಯ್, ಅ.15ರಂದು ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿಯೂ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದಿದ್ದರು ಎಂದರು.

ಅಕ್ಷಯ್ ಗುರುಪುರದ ಬಿಜಿಎಸ್ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗಿರೀಶ್ ಮತ್ತು ಶ್ರುತಿ ದಂಪತಿ ಪುತ್ರ. ಅಸ್ಟ್ರಾ ಸ್ಪೋರ್ಟ್ಸ್ ಅಕಾಡೆಮಿಯ ಗುರುಪುರ ಶಾಖೆಯಲ್ಲಿ ತರಬೇತುದಾರ ಕಿಶೋರ್ ಅವರ ಮಾರ್ಗದರ್ಶನದಲ್ಲಿ ಕರಾಟೆ ಅಭ್ಯಾಸ ಮಾಡುತ್ತಿದ್ದಾರೆ.

ಅಕ್ಷಯ್ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ ಎಂದರು.
ಅಸೋಸಿಯೇಷನ್ ಕಾರ್ಯದರ್ಶಿ ಅನೂಪ್ ಆರ್. ಶೇಖರ್, ಖಜಾಂಚಿ ಶ್ರೇಯಸ್ ಎಚ್.ಎಲ್., ತರಬೇತುದಾರರಾದ ಕಿಶೋರ್, ದಿಗಂತ್ ಹಾಗೂ ಪೋಷಕರಾದ ಗಿರೀಶ್, ಶ್ರುತಿ ಇದ್ದರು.