ಶಿವಮೊಗ್ಗ: ನಗರದ ಪ್ರತಿಷ್ಠಿತ ಡಿವಿಎಸ್ ವಿದ್ಯಾ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಮತ್ತು ಸಂಸ್ಥೆಯ ಅಮೃತ ಮಹೋತ್ಸವ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಜೃಮಹೋತ್ಸವ ಮತ್ತು ಡಿವಿಎಸ್ ಪ.ಪೂ.ಸ್ವತಂತ್ರ ಕಾಲೇಜಿನ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ನ.27 ರಿಂದ 29ರ ವರೆಗೆ ಮೂರು ದಿನಗಳ ಕಾಲ ಡಿವಿಎಸ್ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಬಸಪ್ಪಗೌಡ ತಿಳಿಸಿದರು.

ಅವರು ಇಂದು ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂರು ದಿನಗಳ ಕಾಲ ಡಿವಿಎಸ್ ಸಂಸ್ಥೆಯ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳ ವಿವರ ನೀಡಿದರು.

ನ.27ರಂದು ಬೆಳಿಗ್ಗೆ 10 ಗಂಟೆಗೆ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಶಾಸಕರಾದ ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಎಡಿಸಿ ಅಭಿಷೇಖ್ ವಿ., ಎಂಎಡಿಬಿ ಕಾರ್ಯದರ್ಶಿ ಜಿ.ಅನುರಾಧಾ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಕೇಶವ್ ಎಚ್., ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ.ಯೋಗೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ. ಅಧ್ಯಕ್ಷತೆಯನ್ನು ಡಾ.ಎ.ಸತೀಶ್ ಕುಮಾರ್ ಶೆಟ್ಟಿ ವಹಿಸಲಿದ್ದಾರೆ ಎಂದರು.

ಅಂದು ಮಧ್ಯಾಹ್ನ ವಿನೋಬನಗರ ಡಿವಿಎಸ್ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಎಸ್.ಆರ್.ಮಂಜುನಾಥ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ, ಬಿಇಒ ರಮೇಶ್ ಪಾಲ್ಗೊಳ್ಳಿದ್ದಾರೆ. ಡಿವಿಎಸ್ ಖಜಾಂಚಿ ಎನ್.ಆರ್.ನಿಥಿನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂದು ಸಂಜೆ 5-30ಕ್ಕೆ ಡಿವಿಎಸ್ ಪ್ರೌಢಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಡಿವಿಎಸ್ ಪ್ರೌಢಶಾಲೆಗೆ ಕಡಿದಾಳ್ ಮಂಜಪ್ಪ ಸ್ಮಾರಕ ಪ್ರೌಢಶಾಲೆ ಎಂಬ ನಾಮಕರಣ ಘೋಷಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಶಾಸಕ ಡಿ.ಎಸ್.ಅರುಣ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್ ಹಾಗೂ ಆರ್.ಪ್ರಸನ್ನಕುಮಾರ್ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಕೆ.ಬಸಪ್ಪಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ನ.28ರಂದು ಬೆಳಿಗ್ಗೆ 10 ಗಂಟೆಗೆ ಡಿವಿಎಸ್ ಸಂಯುಕ್ತ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ನಡೆಯಲಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಮೆಗ್ಗಾನ್ ವೈದ್ಯಾಧಿಕಾರಿ ಡಾ.ಗಿರೀಶ್ ಬಾಬು ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಸ್ಥೆಯ ನಿರ್ದೇಶಕ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ಅಂದು ಮಧ್ಯಾಹ್ನನಡೆಯುವ ಡಿವಿಎಸ್ ಪ.ಪೂ (ಸ್ವ) ವಾರ್ಷಿಕೋತ್ಸವ ಸಮಾರಂಭದಲ್ಲಿ ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ, ಸೂಡಾ ಅಧ್ಯಕ್ಷ ಸಿ.ಜಿ.ಮಧುಸೂಧನ್, ಮತ್ತಿತರರು ಪಾಲ್ಗೊಳಲಿದ್ದು ಡಿವಿಎಸ್ ಉಪಾಧ್ಯಕ್ಷ ಜಿ.ಮಧುಸೂಧನ ಅಧ್ಯಕ್ಷತೆ ವಹಿಸುವರು. ಸಂಜೆ ಡಿವಿಸ ಡಿಗ್ರಿ ಕಾಲೇಜಿನ ವಜೃಮಹೋತ್ಸವ ಸಮಾರಂಭವನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಚ್.ಬಿ.ನರೇಂದ್ರ ಪ್ರಸಾದ್, ನ್ಯಾ.ಮೂ.ಸೂರಜ್ ಗೋವಿಂದರಾಜ್, ನ್ಯಾಮೂ.ಕೆ.ಬಿ.ಗೀತಾ, ನಿವೃತ್ತ ನ್ಯಾ.ಮೂ.ಜೈಬುನ್ನೀಸಾ ಎಂ.ಖಾಜಿ ಹಾಗೂ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಮಂಜುನಾಥ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಬಸಪ್ಪಗೌಡ ಅಧ್ಯಕ್ಷತೆ ವಹಿಸುವರು.

ನ.20ರಂದು ಭಾನುವಾರ ಬೆಳಿಗ್ಗೆ ಡಿವಿಎಸ್ (ಸ್ವ) ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದ್ದು ಶಾಸಕಿ ಬಲ್ಕಿಶ್ ಬಾನು, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಎನ್.ಇ.ಎಸ್.ಕಾರ್ಯದರ್ಶಿ ಎಸ್.ಎನ್.ನಾಗರಾಜ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ನಿರ್ದೇಶಕ ಕೊಳಲೆ ರುದ್ರಪ್ಪ ವಹಿಸಲಿದ್ದಾರೆ. ಅಂದು ಮಧ್ಯಾಹ್ನ 2-30ರಿಂದ ಡಿವಿಎಸ್ ಪ್ರಾ.ಶಾಲೆ ಮತ್ತು ಡಿವಿಎಸ್ ಸಂಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷ ಎಸ್.ಟಿ.ಹಾಲಪ್ಪ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಸಂಜೆ 5-30ಕ್ಕೆ ಡಿವಿಎಸ್ ಪ.ಪೂ. (ಸ್ವ) ಕಾಲೇಜಿನ ಸುವರ್ಣ ಮಹೋತ್ಸವ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಸಂಸದ ಬಿ.ವೈ.ರಾಘವೇಂದ್ರ ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗ ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಉದ್ಯಮಿ ರೇವತಿ ಕಾಮತ್, ಮಾಜಿ ಸಚಿವ ಬಿ.ಸಿ.ಪಾಟೀಲ್. ಮಾಜಿ ಶಾಸಕರಾದ ಡಿ.ಎನ್.ದೇವರಾಜ್, ಸುರೇಶ್ ಡಿ.ಎಸ್., ಮೊದಲಾದವರು ಆಗಮಿಸಲಿದ್ದಾರೆ ಎಂದರು.

ಸಭಾ ಕಾರ್ಯಕ್ರಮಗಳ ನಡುವೆ ಮೂರೂ ದಿನಗಳ ಕಾಲ ಸಂಜೆ ಸಾಂಸ್ಕøತಿಕ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ನಾಡಿನ ಹೆಸರಾಂತ ಕಲಾವಿದರಾದಡಾ.ಶಮಿತಾ ಮಲ್ನಾಡ್, ಅಲೋಕ್ ಬಾಬು ಸೇರಿದಂತೆ ಹಲವಾರು ಕಲಾವಿದರು ನಡೆಸಿಕೊಡಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಜಿ.ಮಧುಸೂಧನ್, ಕಾರ್ಯದರ್ಶಿ ಎಸ್.ಪಿ.ದಿನೇಶ್, ಸಹಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ, ಬಿ.ಗೋಪಿನಾಥ್, ಕುಲಸಚಿವ ಡಾ.ವೆಂಕಟೇಶ್, ಪ್ರಾಂಶುಪಾಲರಾದ ಪ್ರೊ.ಕುಮಾರಸ್ವಾಮಿ, ಸವಿತಾ ರಾವ್, ಲಕ್ಷ್ಮಣ, ನಾಗರತ್ನಾ, ಪೂರ್ಣಿಮಾ, ಸುರೇಶ್, ಸಿ.ಕೆ.ಶ್ರೀಧರ್, ಉಮೇಶ್ ಮೊದಲಾದವರಿದ್ದರು.