
ನೋಡಿ
https://youtu.be/KlhRo9toF00?si=le6vpA9Vs_xk5U4J
ಈಗಿನ ಸುದ್ದಿ, ಬ್ರೇಕಿಂಗ್ ನ್ಯೂಸ್ ಮದುವೆ ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಮಹಿಷಿ ತುಂಗೆಯಲ್ಲಿ ನಾಪತ್ತೆ!

ತೀರ್ಥಹಳ್ಳಿ,ನ,26:
ತಾಲೂಕಿನ ಮಹಿಷಿ ಗ್ರಾಮದ ತುಂಗಾ ನದಿಯಲ್ಲಿ ಬೆಂಗಳೂರಿನಿಂದ ಬಂದಿದ್ದ ನಾಲ್ವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರಲ್ಲಿ ಮೂವರು ಕಾನೂನು ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.


ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳಾದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ನಾಪತ್ತೆಯಾದವರು.
ಬೆಂಗಳೂರಿನಿಂದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ನಗರಕ್ಕೆ ಬಂದಿದ್ದ ಯುವಕರು, ಬಳಿಕ ಮಹಿಷಿಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ತುಂಗಾ ನದಿಯ ನೀರಿನ ಬಳಿ ಆಟವಾಡುತ್ತಿದ್ದ ವೇಳೆ ಒಬ್ಬರ ಹಿಂದೆ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಪತ್ತೆಯಾದವರಲ್ಲಿ ಬೆಂಗಳೂರಿನ ಇಟ್ಟಮಡುವಿನ ಪವನ್, ಕತ್ರಿಗುಪ್ಪೆಯ ಕಾರ್ತಿಕ್ ಹಾಗೂ ತಲಘಟ್ಟಪುರದ ನಕುಲ್ ಕಾನೂನು ವ್ಯಾಸಂಗ ಮಾಡುತ್ತಿದ್ದರು. ಚೇತನ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.