ಶಿವಮೊಗ್ಗ: ಭದ್ರಾ ಜಲಾಶಯದ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸುವಂತೆ ಆಗ್ರಹಿಸಿ ಭದ್ರಾ ಹಚ್ಚು ಕಟ್ಟುದಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಯುವ ನಾಯಕ ಹಾಗೂ ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ದೀಪಕ್ ಪೂರ್ಯಾನಾಯ್ಕ್ ಬೆಂಬಲ ವ್ಯಕ್ತಪಡಿಸಿದರು.

ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರೈತರು ಪುರಲೆಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಈ ಹಿನ್ನೆಲೆಯಲ್ಲಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಯುವ ನಾಯಕ ದೀಪಕ್ ಪೂರ್ಯಾನಾಯ್ಕ್ ಅವರು ಹೋರಾಟ ನಿರತ ರೈತರನ್ನು ಭೇಟಿಯಾಗಿ ಅವರ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು. ರೈತರ ನೀರಾವರಿ ಹಕ್ಕು ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆಯ ಮಹತ್ವವನ್ನು ಪರಿಗಣಿಸಿ, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹೋರಾಟ ನಿರತ ರೈತರು ಉಪಸ್ಥಿತರಿದ್ದರು.