
ಶಿವಮೊಗ್ಗ: ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ

ರೈತರ ಹಿತರಕ್ಷಣಾ ಸಮಿತಿ ವತಿಯಿಂದ ನ. 30ರಂದು ನಗರದಲ್ಲಿರುವ ಮುಖ್ಯ ರಸ್ತೆಗಳ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರೈತ ಸಂಘದ ಸಂಸ್ಥಾಪಕ ಸದಸ್ಯ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ನೀರಿನ ಅಗತ್ಯವಿದೆ.

ಹೀಗಾಗಿ, ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಎಸ್. ಮಂಜುನಾಥೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.