ಶಿವಮೊಗ್ಗ, ಆ.17:
ಕೋವಿಡ್ 19 ಪಾಸಿಟಿವ್ ಸಂಖ್ಯೆ ಇಳಿಕೆ ಎನಿಸಿದರೂ ಸಹ ಸಾವಿನ ಸಂಖ್ಯೆ ನಿರಂತರವಾಗುತ್ತಿರುವುದು ಆತಂಕದ ಸಂಗತಿ. ಇಂದಿನ ಮಾಹಿತಿಯನುಸಾರ 46 ಜನರಲ್ಲಿ ಸೋಂಕು ತಗುಲಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
4655 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 4242 ಜನರಿಗೆ ನೆಗೆಟಿವ್ ಬಂದಿದೆ.
ಇಂದು ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ 1055 ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. 43 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 36 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 17 ಜನ ಸೋಂಕಿನಿಂದ ದಾಖಲಾಗಿದ್ದಾರೆ. 182 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. ಒಟ್ಟು 327 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಕಾಲೇಜಿನ ವಿದ್ಯಾರ್ಥಿ/ನಿಯರು ಮತ್ತು ಸಿಬ್ಬಂದಿಗಳನ್ನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. ಇವತ್ತು ವಿದ್ಯಾರ್ಥಿ/ನಿಯರನ್ನ ಕೊರೋನ ಟೆಸ್ಟ್ ಗೆ ಒಳಪಡಿಸಲಾಗಿದೆ, 02 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ ಬಂದಿದೆ. ಇವತ್ತು 00 ಸಿಬ್ಬಂದಿಗೆ ಕೊರೋನ ಪಾಸಿಟಿವ್ ಬಂದಿದೆ ಎಂದು ಬುಲಿಟಿನ್ ತಿಳಿಸಿದೆ.
ತಾಲೂಕವಾರು ವಿವರ
ಶಿವಮೊಗ್ಗ: 22,
ಭದ್ರಾವತಿ: 10,
ಶಿಕಾರಿಪುರ: 03,
ತೀರ್ಥಹಳ್ಳಿ:04,
ಸೊರಬ-01,,
ಹೊಸನಗರ-03,
ಸಾಗರದಲ್ಲಿ -02,
ಹೊರಜಿಲ್ಲೆ:01,
