ಶಿವಮೊಗ್ಗ: ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ಖಂಡಿಸಿ ಕಾಂಗ್ರೆಸ್ ಮುಖಂಡರಿಂದ ಇಂದು ಕಾಮಗಾರಿ ಗುದ್ದಲಿ ಪೂಜೆ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ 20 ಹೆಚ್ಚು ಕಾಂಗ್ರೆಸ್ ಪಕ್ಷದ ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಯೋಜನೆ, ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಾಗೂ ತುಂಗಾ ನದಿ ಮೇಲ್ಸೇತುವೆ ಕಾಮಗಾರಿ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರನ್ನು ಹಾಗೂ ವಾರ್ಡಿನ ಸದಸ್ಯೆ ಹಾಗೂ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ರವರನ್ನು ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನು ಮುದ್ರಿಸಿದೆ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದನ್ನು ಖಂಡಿಸಿದರು.
ಈ ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಆರ್ ಸಿ. ನಾಯ್ಕ , ಮೇಹಕ್ ಶರೀಫ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್ , , ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಮೊಹಮ್ಮದ್ ನಿಹಾಲ್ ಎನ್ಎಸ್ ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮರೇಶ್ , ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಸುವರ್ಣ ನಾಗರಾಜ್ , ಪಕ್ಷದ ಮುಖಂಡರುಗಳಾದ ಪುಷ್ಪಕ್ ಕುಮಾರ್, ಮಸ್ತಾನ್, ವೆಂಕಟೇಶ್ , ಪುರ್ಲೆ ಮಂಜು , ಬಾಬುಸಾಬ್, ಅಬ್ದುಲ್, ನವೀನ್, ವಿನಯ್ ಪವನ್ ಮಲ್ಲಿ ಇತರರು ಇದ್ದರು.