Banglur Crime



ಶಿವಮೊಗ್ಗ : ಅಕ್ರಮ ಮದ್ಯ ತಡೆಯದ ಅಬಕಾರಿ ಇಲಾಖೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿರುವ ಬಗ್ಗೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಅಬಕಾರಿ ಅಧಿಕಾರಿಗಳನ್ನು ಸಭೆಗೆ ಕರೆಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಸಭೆಗೆ ಆಗಮಿಸಿದ ಅಬಕಾರಿ ಇಲಾಖೆ ನಿರೀಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಮಧ್ಯಮಾರಾಟ ತಡೆಯದ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ತೂದೂರು ಗ್ರಾಮ ಪಂಚಾಯಿತಿಯ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರಿದ್ದಾರೆ. ಕಳೆದ ಎರಡು ದಿನದ ಅವಧಿಯಲ್ಲಿ ಅಕ್ರಮ ಮದ್ಯ ಸೇವಿಸಿ 20 ವರ್ಷದ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಗ್ರಾಮಗಳಲ್ಲಿ ಅಕ್ರಮವಾಗಿ ಥರ್ಡ್ಸ್ ಮದ್ಯ ಮಾರಾಟವಾಗುತ್ತಿದ್ದು, ಇದು ಜೀವಕ್ಕೆ ಕುತ್ತು ತರುತ್ತದೆ. ಅಬಕಾರಿ ಇಲಾಖೆ ನಿರ್ಲಕ್ಷದಿಂದ ಹೀಗಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಅಕ್ರಮ ಮದ್ಯ ತಡೆಯದ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತು ಎಸಿಬಿ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!