ಶಿವಮೊಗ್ಗ : ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕಾರಿಯಿಂದ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಶಿಕ್ಷಣ ನೀತಿ ಮತ್ತು ಕೈಗಾರಿಕಾ ನೀತಿಗಳನ್ನು ಜಾರಿಗೆ ತಂದಿದ್ದು ಪರಿಣಾಮಕಾರಿ ಅನುಷ್ಟಾನಗೊಳಿಸಬೇಕಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದ ವಾಣಿಜ್ಯ ಸಪ್ತಾಹ ಅಂಗವಾಗಿ ಇಂದು ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸ ಲಾಗಿದ್ದ ಒಂದು ದಿನದ ರಫ್ತುದಾರರ ಸಮಾವೇಶ ಮತ್ತು ರಫ್ತು ಅಭಿವೃದ್ದಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವತು ಮಾತನಾಡಿದರು.
ಕೇವಲ ಶಿಕ್ಷಣದ ಮೂಲಕ ಮಾತ್ರ ಉತ್ತಮ ಬದಲಾ ವಣೆ ಸಾಧ್ಯ ಎಂದು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಅದರೊಂದಿಗೆ ಆರ್ಥಿಕ ಸಹಕಾರ ಮತ್ತು ಆರ್ಥಿಕ ಶಕ್ತಿಯನ್ನು ಯಾವ ರೀತಿ ಹೆಚ್ಚಿಸಬೇಕೆಂಬ ನಿಟ್ಟಿನಲ್ಲಿ ಚಿಂತನೆ ಮಾಡುತ್ತಿದೆ. ಜೊತೆಗೆ ೨೦೨೦-೨೫ ರ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ಈ ನೀತಿಗಳನ್ನು ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕಿದೆ ಎಂದರು.
ಕೊರೊನಾ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ದಿಗೆ ಕೊರತೆ ಆಗದಂತೆ ಎಲ್ಲರ ಸಹಕಾರದೊಂದಿಗೆ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ. ರಸ್ತೆ, ರೈಲು ಮತ್ತು ವಾಯು ಮಾರ್ಗಕ್ಕೆ ಸಂಬಂಧಿಸಿದಂತ ಜಿಲ್ಲೆಯಲ್ಲಿ ಉತ್ತಮ ಅಭಿವೃದ್ದಿಯಾಗಿದೆ. ಕೈಗಾರಿಕೋದ್ಯಮಿಗಳಿಗೆ ಹೆಚ್ಚಿನ ಸಹಕಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳು ಆಗುತ್ತಿದ್ದು ನಿಮ್ಮದೇನಾದರೂ ಸಲಹೆಗಳಿದ್ದರೆ ತಿಳಿಸಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್ ಸ್ವಾಗತಿಸಿದರು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿ ಎಂ.ಎ.ರಮೇಶ್ ಹೆಗ್ಡೆ, ಮಂಡ್ಲಿ-ಕಲ್ಲೂರು ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಘೇವರ‍್ಚಂದ್.ವಿ, ಸಾಗರ ರಸ್ತೆ ಕೈಗಾರಿಕಾ ವಸಾಹತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಉಮೇಶ್ ಶಾಸ್ತ್ರಿ ಮತ್ತು ಇತರೆ ಕೈಗಾರಿಕೋದ್ಯಮಿಗಳು ಪಾಲ್ಗೊಂ ಡಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!