ಶಿವಮೊಗ್ಗ:
ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಮೊಯಿದ್ದೀನ್(42) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅವರಿಗೆ ಹೃದಯಾಘಾತವಾಗಿದೆ. ಪಾಲಿಕೆಯ ಜನನ ಮತ್ತು ಮರಣ ವಿಭಾಗದಿಂದ ಪರಿಷತ್ ಸಭಾಂಗಣದವರೆಗೂ ಮೊಯಿದ್ದೀನ್ ಅವರು ನಡೆದುಕೊಂಡು ಬಂದಿದ್ದು, ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರನ್ನು ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ದಾಖಲಿಸಿದ ನಂತರ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೊಯಿದ್ದೀನ್ ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದಾರೆ. ಮೊಯಿದ್ದೀನ್ ನಿಧನಕ್ಕೆ ಪಾಲಿಕೆ ನೌಕರರು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಮೆಟ್ರೋ ಆಸ್ಪತ್ರೆಗೆ ಮೇಯರ್, ಉಪ ಮೇಯರ್, ಆಯುಕ್ತರು, ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು

By admin

ನಿಮ್ಮದೊಂದು ಉತ್ತರ

error: Content is protected !!