ಶಿವಮೊಗ್ಗ: ಸೆಕ್ಷನ್ ಉಲ್ಲಂಘನೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಗೋಂದಿ ಚಟ್ನಳ್ಳಿ ಗ್ರಾಮದ ವಾಸಿ ಸತೀಶ ಆದೇಶ ಉಲ್ಲಂಘಿಸಿದವರು.
ಇವರು ತನ್ನ ಪಾನ್ ಮಸಾಲ ಅಂಗಡಿಯ ಮುಂದೆ 8 ರಿಂದ 10 ಜನರ ಗುಂಪು ಸೇರಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು.
ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.