ಭದ್ರಾವತಿಯ ನಿರ್ಮಲಾ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.
ಶಿವಮೊಗ್ಗಕ್ಕೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸದ್ಯ ಸೀಲ್ಡೌನ ಮಾಡಲಾಗಿದೆ.
ಅಲ್ಲದೆ ಸ್ಯಾನಿಟೈಸ್ ಮಾಡುವ ಉದ್ದೇಶವಿರುವ ನಿರ್ಮಲಾ ಆಸ್ಪತ್ರೆಯನ್ನು ಒಂದು ದಿನದ ಮಟ್ಟಿಗೆ ಮುಚ್ಚಲಾಗಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಸೂಚನೆಯಂತೆ ಇಲ್ಲಿನ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲಾಗಿದೆ. ಆಸ್ಪತ್ರೆ ಮುಂಭಾಗ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.