ಶಿವಮೊಗ್ಗ,ಡಿ.26:
ಬರುವ ಡಿ.28ರ ಮಂಗಳವಾರದಿಂದ ಹತ್ತುದಿನಗಳ ಕಾಲ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ನೈಟ್ ಕರ್ಪ್ಯೂ ಜಾರಿಯಾಗಲಿದೆ.
ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಡಿ.28ರಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ

ಎಂದು ಇಂದು ಸುದ್ದಿಗೋಷ್ಟಿಯಲ್ಲಿ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.


ಮುಖ್ಯಮಂತ್ರಿ ನೇತೃತ್ವದ ಮಹತ್ತರ ಸಭೆ ನಂತರ ಸಚಿವರು ಮಾತನಾಡುತ್ತಾ ಡಿ.28ರಿಂದ 10 ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದರು.


ಹೋಟೆಲ್’ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ಸಭೆ ಸಮಾರಂಭ, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಮಾತ್ರ ಅವಕಾಶ ನೀಡಬೇಕು. ರಾತ್ರಿ 10 ಗಂಟೆ ನಂತರ ಸಿನಿಮಾ ಥಿಯೇಟರ್ ಬಂದ್ ಆಗಲಿದೆ ಎಂದಿದ್ದಾರೆ.
ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುಗು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಉಳ್ಳವರಿಗೆ ಜನವರಿ 10ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!