ಶಿವಮೊಗ್ಗ: ಕನ್ನಡ ಧ್ವಜ ಸುಟ್ಟು ಕನ್ನಡಿಗರಿಗೆ ಅವಮಾನ ಮಾಡಿ ರುವ ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕದಲ್ಲಿ ಎಲ್ಲಾ ಭಾಷಿಕರು ಒಗ್ಗಟ್ಟಿನಿಂದ ಜೀವನ ನಡೆಸುತ್ತಿದ್ದು, ಮಹಾರಾಷ್ಟ್ರದ ಕೆಲವು ಕಿಡಿಗೇ ಡಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ದುರುದ್ಧೇಶದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ಎಂಬ ಸಂಘಟನೆ ಹಾಗೂ ರಾಜಕೀಯ ಪಕ್ಷ ಹುಟ್ಟು ಹಾಕಿ ಬೆಳಗಾವಿಯಲ್ಲಿ ನಿರಂತರವಾಗಿ ಸಾರ್ವಜ ನಿಕರ ನೆಮ್ಮದಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಏಕೀಕರಣವಾದಾಗಿನಿಂದಲೂ ನಿರಂತರವಾಗಿ ಬೆಳಗಾವಿಯಲ್ಲಿ ಹಿಂಸಾಚಾರಕ್ಕೆ ಕಾರಣವಾಗಿರುವ ಕರ್ನಾಟಕ ಸರ್ಕಾರಕ್ಕೆ ವಿರುದ್ಧವಾಗಿ ಕಾನೂನು ಬಾಹಿರವಾಗಿ ಕೆಲಸ ಮಾಡುವ ಎಂಇಎಸ್ ಸಂಘಟನೆ ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ, ಪ್ರಮುಖರಾದ ನಿಂಗರಾಜ್, ಸಂತೋಷ್, ದೇವೇಂದ್ರಪ್ಪ, ನಯನಾ, ರಾಜಮ್ಮ, ಎಂ. ರಾಜಣ್ಣ, ಸುರೇಶ್, ನಟೇಶ್ ಇತರರಿದ್ದರು.