ಭದ್ರಾವತಿ: ಮಹಿಳೆ ಮೇಲೆ ದೌರ್ಜನ್ಯ ನಡೆಸಲು ಪ್ರಯತ್ನಿಸಿ ಅದನ್ನು ತಡೆಯಲು ಬಂದ ಪತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ವ್ಯಕ್ತಿಗೆ ೪ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ವೈ. ಶಶಿಧರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.


ಸೀಗೆಬಾಗಿ ವಾಸಿ ಮನ್ಸೂರ್ ಅಲಿಖಾನ್ ಶಿಕ್ಷೆಗೆ ಒಳಗಾದವನು. ಈತನ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಮನೆಯೊಳಗೆ ಅಕ್ರಮ ಪ್ರವೇಶ ಹಾಗೂ ಕೊಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ೨೦೧೯ರಲ್ಲಿ ದೂರು ದಾಖಲಾಗಿತ್ತು. ಸೀಗೆಬಾಗಿ ವಾಸಿಯಾದ ಮನ್ಸೂರ್ ಅಲಿ ಖಾನ್ ೨೦೧೯ರ ಜುಲೈ ೨೨ರಂದು ರಾತ್ರಿ ಗೌಡರಹಳ್ಳಿ ಆಲೆಮನೆಯಲ್ಲಿ ಕೆಲಸಕ್ಕೆ ಬಂದಿದ್ದ ಕೂಲಿಯಾಳು ನಭೀಕುಲ್ ಮನೆಯೊಳಗೆ ಪ್ರವೇಶಿಸಿ ಆತನ ಪತ್ನಿ ಜತೆ ಅನುಚಿತವಾಗಿ ವರ್ತಿಸಲು ಮುಂದಾದ ವೇಳೆ ತಡೆಯಲು ಬಂದ ನಭೀಕುಲ್ ಮೇಲೆ ಮರದ ತುಂಡಿನಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ನಭೀಕುಲ್ ಸ್ಥಳದಲ್ಲೇ ಮೃತಪಟ್ಟಿದ್ದ.


ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನ್ಸೂರ್ ಅಲಿಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಮನ್ಸೂರ್ ದೋಷಿ ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ಹಾಗೂ ? ೨೦ ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ನೀಡಲು ತಪ್ಪಿದ್ದಲ್ಲಿ ಮೂರು ವರ್ಷ ಶಿಕ್ಷೆ ನೀಡಿ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಪಿ.ರತ್ನಮ್ಮ ಅವರು ವಾದ ಮಂಡಿಸಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!