ಶಿವಮೊಗ್ಗ,ಜ.೧೫:
ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಸಾವಿರಾರು ಅತಿಥಿ ಉಪನ್ಯಾಸಕರ ಬದುಕಿಗೆ ನೆರವಾಗಿ ಈ ಐತಿಹಾಸಿಕ ತೀರ್ಮಾನ ತೆಗೆದುಕೊಂಡ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸಚಿವರುಗಳಿಗೆ, ಶಾಸಕರುಗಳಿಗೆ ಅಭಿನಂದಿಸಿರುವ ವಿಧಾನ ಪರಿಷತ್‌ನ ಶಾಸಕ ಡಿಎಸ್ ಅರುಣ್ ಅವರು ಇದೇ ಸಂದರ್ಭದಲ್ಲಿ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.
ಐತಿಹಾಸಿಕ ತೀರ್ಪಿದು ಎನ್ನಲು ಕಾರಣ ತಿಳಿಸಿರುವ ಅರುಣ್ ನೀಡಿರುವ ಮುಖ್ಯಾಂಶಗಳು ಇಲ್ಲಿವೆ.
- ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ.
- ಯುಜಿಸಿ ಕ್ವಾಲಿಫೈಡ್ ಹೊಂದಿದ್ದು ೫ ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ೩೨,೦೦೦/- ಹಾಗೂ ಐದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ ೩೦,೦೦೦/-
- ಯುಜಿಸಿ ಕ್ವಾಲಿಫೈಡ್ ಹೊಂದಿರದೇ ೫ ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ೨೮,೦೦೦/- ಐದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ ೨೬,೦೦೦/-
- ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ನೇಮಕ.