ಹೊಸನಗರ: ಪಟ್ಟಣದ ಮಾರಿಗುಡ್ಡದ ಮಾರಿಕಾಂಬಾ ದೇವಿ ಜಾತ್ರೆಯನ್ನು ಮುಂದೂಡಲಾಗಿದೆ.
ದೇವಸ್ಥಾನದ ಆವರಣದಲ್ಲಿ ಫೆಬ್ರವರಿ 1ರಂದು ಜಾತ್ರೆ ನಡೆಸಲು ನಿರ್ಣಯ ಕೈಗೊಳ್ಳಲಾಗಿತ್ತು. ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ಜಾತ್ರೆಯನ್ನು ಮುಂದೂಡಲಾಗಿದೆ.
ಕೊರೊನಾ ಪ್ರಕರಣಗಳು ಕಡಿಮೆಯಾದ ಬಳಿಕ ಜಾತ್ರೆ ನಡೆಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ತಿಳಿಸಿದ್ದಾರೆ.