ಶಿವಮೊಗ್ಗ,ಜ.18:
ನಗರದ ಶಾಲೆಗಳ ಮಕ್ಕಳು ಹಾಗೂ ಶಿಕ್ಷಕರಿಗೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಗರ ವ್ಯಾಪ್ತಿಯ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಾಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ 1ರಿಂದ 9ನೇ ತರಗತಿಯ ಎಲ್ಲಾ ಶಾಲೆಗಳಿಗೆ ಬುಧವಾರದಿಂದ ಮೂರು ದಿನ ರಜೆ ಘೋಷಿಸಿದ್ದೇವೆ. ಶನಿವಾರ, ಭಾನುವಾರ ವೀಕೆಂಡ್ ಕರ್ಫ್ಯೂ ನಂತರ ಸೋಮವಾರ ತರಗತಿಗಳು ಮತ್ತೆ ಆರಂಭವಾಗಲಿವೆ ಎಂದು ನಗರದ ಸುಮಾರು 45 ಶಾಲೆ 208 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಇದು ಮತ್ತಷ್ಟು ಹರಡದಂತೆ ಮುಂಜಾಗ್ರತೆಯಾಗಿ ಎಲ್ಲಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.