ಶಿವಮೊಗ್ಗ, ಫೆ.05 :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ‘ಓಬವ್ವ ಆತ್ಮ ರಕ್ಷಣಾ ಕಲೆ’ ಕರಾಟೆ ತರಬೇತಿ ಉದ್ಘಾಟನೆ ಕಾರ್ಯಕ್ರಮವನ್ನು ಫೆ.07 ರ ಬೆಳಿಗ್ಗೆ 11 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಾಸಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಗೌರವ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರು, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯ ಅಧ್ಯಕ್ಷರು, ಪಾಲಿಕೆ ಮಹಾಪೌರರು, ಕಾಡಾ ಮತ್ತು ಸೂಡಾ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪಾಲ್ಗೊಳ್ಳುವರು.