ಶಿವಮೊಗ್ಗ, ಫೆಬ್ರವರಿ ೦೮,: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ ೨ ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.
ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್‌ರವರಿಗೆ ದೂರು ನೀಡುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್‌ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.